ಫೆ. 15ರಂದು ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಸಿಎಂ ಅಡಿಗಲ್ಲು

ಫೆ. 15ರಂದು ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಸಿಎಂ ಅಡಿಗಲ್ಲು

ಕೊಪ್ಪಳದ ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ರೂ. ಅನುದಾನ ನೀಡಿದ್ದೇವೆ. ಬೆಟ್ಟದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಅದರಂತೆ ಫೆ. 15ರಂದು ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಿಎಂ ಅಡಿಗಲ್ಲು ಸ್ಥಾಪನೆ ಮಾಡಲಿದ್ದಾರೆ. ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯ 100 ಕೋಟಿ ರೂ., KKRDBಯ 40 ಕೋಟಿ ಅನುದಾನ ನೀಡಲಿದೆ.