ಫೆ.6ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ - ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಫೆಬ್ರವರಿ 6 ರಂದು ನಡೆಯಲಿರುವ ಇಂಡಿಯಾ ಎನರ್ಜಿ ವೀಕ್, ಅಂತರರಾಷ್ಟ್ರೀಯ ಸಮ್ಮೇಳನವಿದ್ದು, ಇದರ ಉದ್ಘಾಟನೆಗೆ ಪ್ರಧಾನಿ ಮೋದಿಯವರು ( PM Modi ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವನ್ನು ಮುಗಿಸಿ ತುಮಕೂರಿನಲ್ಲಿ ಹೆಚ್ ಎ ಎಲ್ ನ ಹೆಲಿಕಾಪ್ಟರ್ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿ, 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ರೈತಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ರೈತರಿಗೆ ಯಂತ್ರೋಪಕರಣ ಬಳಸುವಾಗ ಆಗುವ ಡೀಸೆಲ್ ವೆಚ್ಚವನ್ನು ಭರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ರೈತಪರ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಮಹದಾಯಿ ಯೋಜನೆ
ಮಹದಾಯಿ ಯೋಜನೆ ತೀರ್ಪಿನ ಬಗ್ಗೆ ಗೋವಾ ಮುಖ್ಯಮಂತ್ರಿಗಳು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ ನ ಆದೇಶದ ಮೇಲೆ ಟ್ರಿಬ್ಯುನಲ್ ರಚನೆಯಾಗಿ, ಹತ್ತು ವರ್ಷಗಳ ಕಾಲ ಎಲ್ಲ ಆಯಾಮಗಳಲ್ಲಿ ಪರಿಶೀಲನೆಯನ್ನು ನಡೆಸಿ ಟ್ರಿಬ್ಯುನಲ್ ತೀರ್ಪು ನೀಡಲಾಗಿದೆ. ಆ ತೀರ್ಪಿನ ಅನುಷ್ಠಾನದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ 2017 ರಲ್ಲಿ ಮಾಡಿತ್ತು. ಡಿಪಿಆರ್ ಅನುಮೋದನೆಯಾಗಿದ್ದು, ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಕಾನೂನು ಹೋರಾಟದ ನಂತರವೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಹೆಚ್. ವಿಶ್ವನಾಥ್ ಅವರ ಹೇಳಿಕೆಗಳಿಗೆ ನಾನೆಂದೂ ಉತ್ತರವನ್ನು ಕೊಟ್ಟಿಲ್ಲ. ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದರು