ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ : ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್

ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ : ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್

ತುಮಕೂರು : ರಾಜ್ಯ ಬಜೆಟ್‌ ಅಧಿವೇಶನದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.'ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ ಬೇರೆ ಪಕ್ಷ ಸೇರಲು ಸಾಧ್ಯವಿಲ್ಲ.

ಹೀಗಾಗಿ ಬಜೆಟ್‌ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕ್ಷೇತ್ರದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಲಹೆಯಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಜೊತೆ ಶಾಸಕ ಶ್ರೀನಿವಾಸ್ ಕಾಣಿಸಿಕೊಂಡಿದ್ದರು. ಅವರು ಕಾಂಗ್ರೆಸ್ ಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ.