ಬಲವಂತದಿಂದ ಮತಾಂತರ ಮಾಡಿದರೆ ಕ್ರಮ: ಆರಗ ಜ್ಞಾನೇಂದ್ರ
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯಲ್ಲಿ ಲವ್ ಜಿಹಾದ್ ಪ್ರಕರಣಗಳ ವಿರುದ್ದವೂ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದರಲ್ಲಿ ಯಾವುದೇ ತೊಡಕುಗಳಿದ್ದರೆ, ತಿದ್ದುಪಡಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿವಾಹ ನೆಪದಲ್ಲಿ ಯಾರನ್ನೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವಂತಿಲ್ಲ. ಬಲವಂತದಿಂದ ಮತಾಂತರ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಲವ್ ಜಿಹಾದ್‌ಗೆ ಸಂಬಂಧಿಸಿ ರಾಜ್ಯದಲ್ಲಿ ಈಗಾಗಲೇ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.