'ಉಚಿತ ಕೊಡುಗೆಗಳನ್ನು ಜನರು ನಂಬುವುದಿಲ್ಲ, ಬಹಳ ಜಾಗೃತರಾಗಿದ್ದಾರೆ' : ಸಿಎಂ ಬೊಮ್ಮಾಯಿ

ಬೆಂಗಳೂರು : ಉಚಿತ ಕೊಡುಗೆಯ ಘೋಷಣೆಗಳನ್ನು ಜನರು ನಂಬುವುದಿಲ್ಲ, ಜನರು ಬಹಳ ಜಾಗೃತರಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಅವರು ಇಂದು ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಿ ಮಾತನಾಡಿ, ಎಲ್ಲರನ್ನೂ ಎಲ್ಲಾ ಸಮಯದಲ್ಲಿ ಮೋಸ ಮಾಡಲು ಆಗುವುದಿಲ್ಲ, ಉಚಿತವಾಗಿ ನೀಡುತ್ತೇವೆ ಎಂದು ಹೇಳಿದರೆ ಜನರು ನಂಬೋದಿಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ರಾಜ್ಯ ಸರ್ಕಾರ ಘೋಷಿಸಿದಂತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬದ್ಧವಾಗಿದೆ. ಬಡವರಿಗೆ ಸೂರು ಒದಗಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈಗ 5 ಲಕ್ಷ ಮನೆಗಳು ಅಂತಿಮ ಹಂತದಲ್ಲಿದ್ದಾವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಅವರು ಇಂದು ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಿ ಮಾತನಾಡಿ, ಬರುವ ದಿನಗಳಲ್ಲಿ ರಾಜ್ಯದಲ್ಲಿ ಮನೆ ಕಟ್ಟುವುದು ಕಷ್ಟವಾಗಲಿದೆ. ಕಂದಾಯ ಕಾಯ್ದೆಯಲ್ಲಿ ಮನೆ ಕಟ್ಟಲು ನಿರ್ದಿಷ್ಟ ರಿಯಾಯಿತಿಗಳಿಲ್ಲ. ಭೂಮಿ ಬೆಲೆ ಹೆಚ್ಚಾಗಲು ಬೇಡಿಕೆ ಹೆಚ್ಚಾಗಿದೆ ಮತ್ತು ನಾವು ಮಾಡಿರುವ ಕಾನೂನುಗಳಿಂದ ಸಾಮಾನ್ಯ ಜನರು ನಿವೇಶನ ಖರೀದಿ ಮಾಡುವ ಪರಿಸ್ಥಿತಿಯಲ್ಲಿಲ್ಲ. ಹೀಗಾಗಿ ಮನೆ ಕಟ್ಟಲು ಅವಕಾಶ ಸಿಗುವಂತೆ ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ದೂರಮಾಡಿ ನೇರವಾಗಿ ಕೈಗೆಟುಕುವ ಬೆಲೆಯಲ್ಲಿ ಜಮೀನು ದೊರೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವಸತಿಗಾಗಿಯೇ ಜಮೀನು ಪಡೆಯಲು, ಮನೆ ಕಟ್ಟಲು ಎಲ್ಲಾ ಕಾನೂನನ್ನು ಸರಳೀಕರಣ ಮಾಡಲಾಗುವುದು. ಹಾಗಾದಾಗ ಬಡವರಿಗೆ ಮನೆ ಹಾಗೂ ನಿವೇಶನ ನೀಡಬಹುದು ಎಂದರು.