ಬಿಎಸ್ ವೈ ಅಧಿಕಾರದಲ್ಲಿ ಇಲ್ಲ; ಯಾರೋ ಬಿಜೆಪಿಯವರೇ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು: ರಣದೀಪ್ ಸುರ್ಜೇವಾಲ

ಬೆಂಗಳೂರು: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿ.ಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಿರುವುದು ಬೇಸರ ತಂದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಬಿಎಸ್ ವೈ ಈಗ ಅಧಿಕಾರದಲ್ಲಿ ಇಲ್ಲ, ಆದರೂ ದಾಳಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಧುನಿಕ ಶುಕುನಿ. ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.
ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ. 56% ಮೀಸಲಾತಿಯನ್ನು ಹೇಗೆ ಜಾರಿಗೆ ತರ್ತಾರೆ ಅಂತಾ ಪ್ರಶ್ನೆ ಮಾಡಿದ್ದಾರೆ. ಎಎಸ್ ಸಿ, ಎಸ್ ಟಿ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿಮಂತ್ರಿ ಮೋದಿ ಬಂದು ಟಾಟಾ ಬೈಬೈ ಮಾಡಿ ಹೋಗ್ತಾರೆ ಎಂದರು.