ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಲೇ ಇರುವ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.
ಸ್ವ ಕ್ಷೇತ್ರದ ಜಿಲ್ಲೆ ಬೆಳಗಾವಿಯಲ್ಲಿಯೇ ಜನಸಂಕಲ್ಪ ಯಾತ್ರೆ ನಡೆದಿದ್ದರೂ ಜಾರಕಿಹೊಳಿ ಬ್ರದರ್ಸ್ ಸಮಾವೇಶಕ್ಕೆ ಗೈರಾಗಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ನಾಯಕರು ಭರವಸೆ ನೀಡಿದ್ದರು. ಆದರೆ ದೀಪಾವಳಿ ಮುಗಿದು 15 ದಿನಗಳಾದರೂ ಸಂಪುಟ ವಿಸ್ತರಣೆಯಾಗಿಲ್ಲ. ಹಾಗಾಗಿ ಜಾರಕಿಹೊಳಿ ಸಹೋದದರು ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಪಕ್ಷದ ಕಾರ್ಯಕ್ರಮದಿಂದಲೇ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.