ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಮಾಜಿ ಸಿಎಂ ಬಿಎಸ್‌ವೈ

ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಮಾಜಿ ಸಿಎಂ ಬಿಎಸ್‌ವೈ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಮಾಜಿ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಹೇಳಿದ್ದಾರೆ. ಅವರು ಭಾನುವಾರ ರಾಮನಗರ ತಾಲೂಕಿನ ಹರೀಸಂದ್ರ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು, ಇದೇ ವೇಳೆ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಪಡೆದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಅಂತ ತಿಳಿಸಿದರು.

ಇದೇ ವೇಳೇ ಅವರು ಮಾತನಾಡುತ್ತ, ಕೆಲವರು ನಾನೇ ಸಿಎಂ, ನಾನೇ ಉಪಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದೆಲ್ಲವೂ ಸಾಧ್ಯವಾಗುವುದಿಲ್ಲ ಅಂತ ಕುಟುಕಿದರು.