ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ: ಮುತಾಲಿಕ್
ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ರಾಜ್ಯದ 6 ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಬಿಜೆಪಿಯಿಂದ 25 ಟಿಕೆಟ್ ಕೇಳಿದ್ದೇನೆ. ಈ ಪೈಕಿ ಐವರು ಸ್ವಾಮೀಜಿಗಳಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ. ಒಂದು ವೇಳೆ ಟಿಕೆಟ್ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದರು.