ಬಿಜೆಪಿ ತೊರೆಯಲು ಮುಂದಾದ 'ಶಾಸಕ ಎನ್.ವೈ ಗೋಪಾಲಕೃಷ್ಣ': 'ಕಾಂಗ್ರೆಸ್'ನಿಂದಲೂ ಟಿಕೆಟ್ ಸಿಗೋದು ಡೌಟ್ ಎಂದ 'ಕೈ ನಾಯಕರು'

ಬೆಂಗಳೂರು: ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ( BJP MLA N Y Gopalakrishna ) ಅವರಿಗೆ ಈ ಬಾರಿ ಪಕ್ಷದಿಂದ ಟಿಕೆಟ್ ಕೈ ತಪ್ಪೋ ಭೀತಿ ಎದುರಾಗಿದೆ ಎನ್ನಲಾಗುತ್ತಿದೆ. ಹೀಗಾಗಿಯೇ ಕಮಲ ತೊರೆದು, ಕೈ ಹಿಡಿಯಲು ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭೇಟಿಯಾಗಿದ್ದರು ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ( Congress Party ) ಉನ್ನತ ಮೂಲಗಳಿಂದ ಕನ್ನಡ ನ್ಯೂಸ್ ನೌಗೆ ಮಾಹಿತಿ ತಿಳಿದು ಬಂದಿದ್ದು, ನಿನ್ನೆ ಬೆಂಗಳೂರಿನಲ್ಲಿ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡೋದಕ್ಕೆ ಮಹತ್ವದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿತ್ತು. ಈ ವೇಳೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿ ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತ ಪಡಿಸಿದಂತ ಅವರಿಗೆ, ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮುಂದೆ ನೋಡೋಣ. ಈಗಾಗಲೇ ಕ್ಷೇತ್ರಗಳಲ್ಲಿನ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಸರ್ವೆ ಮಾಡಲಾಗಿದೆ. ಒಳ್ಳೆಯ ರಿಪೋರ್ಟ್ ಕಾರ್ಡ್ ಯಾರಿಗೆ ಬಂದಿದೆಯೋ ಅವರಿಗೆ ಟಿಕೆಟ್ ಹಂಚಿಕೆ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿಮ್ಮ ರಿಪೋರ್ಟ್ ಕಾರ್ಡ್ ಬಗ್ಗೆ ಸರ್ವೇ ಮಾಡಿಸಿ, ಮುಂದೆ ನೋಡೋಣ ಎಂದು ಹೇಳಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಒಟ್ಟಾರೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಮುಂಬರುವಂತ ಚುನಾವಣೆಯಲ್ಲಿ ( Election 2023 ) ಕೈ ಪಕ್ಷದಿಂದ ಸ್ಪರ್ಧಿಸಲು ಸಿದ್ಧರಾಗಿದ್ದಂತ ಎನ್ ವೈ ಗೋಪಾಲಕೃಷ್ಣಗೆ ಕಾಂಗ್ರೆಸ್ ವರಿಷ್ಠರೇ ಟಿಕೆಟ್ ನೀಡುವ ಭರವಸೆ ನೀಡಿಲ್ಲ ಎನ್ನಲಾಗುತ್ತಿದೆ. ಈ ಮೂಲಕ ಅತ್ತ ಬಿಜೆಪಿಯಿಂದಲೂ ಟಿಕೆಟ್ ಸಿಗದೇ, ಇತ್ತ ಕಾಂಗ್ರೆಸ್ ಪಕ್ಷದಿಂದಲೂ ಟಿಕೆಟ್ ಸಿಗೋದು ಡೌಟ್ ಎನ್ನಲಾಗುತ್ತಿದೆ. ಆ ಬಗ್ಗೆ ಚುನಾವಣೆಯ ಘೋಷಣೆಯ ಬಳಿಕ, ಬಿಜೆಪಿ, ಕಾಂಗ್ರೆಸ್ ಟಿಕೆಟ್ ಘೋಷಣೆಯ ನಂತ್ರ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.