ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದೀವಿ; ಬಂಧಿಸುವಂತೆ ಡಿ.ಕೆ ಶಿವಕುಮಾರ್ ಆಗ್ರಹ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ.
ಸಿಎಂ ಬೊಮ್ಮಾಯಿ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಒಂದು ಮತಕ್ಕೆ 6 ಸಾವಿರ ರೂ. ಕೊಡುತ್ತೇವೆ ಎಂದು ಜಾರಕಿಹೊಳಿ ಹೇಳಿದ್ದಾರೆ.ಈ ಸಂಬಂಧ ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದೇವೆ. ಐಪಿಸಿ ಸೆಕ್ಷನ್ 171(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಆಗ್ರಹಿಸಿದರು.