ಬಿಜೆಪಿ ಪಕ್ಷಕ್ಕೆ ಹಲವು ನಾಯಕರು ಗುಡ್ ಬೈ : ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ!
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿಯ ಹಲವು ನಾಯಕರು ಈಗಾಗಲೇ ಬಿಜೆಪಿ ಪಕ್ಷಕ್ಕೆರಾಜೀನಾಮೆ ನೀಡಿ ಬೇರೆ ಪಕ್ಷಗಳಿಗೆ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.
ಶಾಸಕ ಎನ್.ವೈ ಗೋಪಾಲಕೃಷ್ಣ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಮಾಜಿ ಸಚಿವ ಎಬಿ ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಹೀಗೆ ಒಬ್ಬೊಬ್ಬರಾಗಿ ಪಕ್ಷ ಬಿಡುತ್ತಿರುವುದಕ್ಕೆ ರಾಜ್ಯ ನಾಯಕರ ಮೇಲೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯಿಂದ ಈ ಬಾರಿ 14 ಕ್ಕೂ ಹೆಚ್ಚುಜನರು ವಲಸೆ ಹೋಗಿದ್ದಾರೆ. ಹೀಗಾಗಿ ಇದೀಗ ಪಕ್ಷ ಬಿಡುವುದಕ್ಕೆ ಕಾರಣ ಏನು ಎಂಬ ವರದಿ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.