ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್, ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್, ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕಿರಣ್ ಕುಮಾರ್ ರಾಜೀನಾಮೆ ನೀಡಿದ್ದರು. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದರು. ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಕಿರಣ್ ಕುಮಾರ್ ಜೊತೆಗೆ ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕೂಡ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿರಣ್ ಕುಮಾರ್ ಹಾಗೂ ನಾಗರಾಜ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ರಾಜ್ಯ ರಾಜಕೀಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರೋದು ಕಾಮನ್. ಈಗ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಬಿಜೆಪಿಯ ಮೂವರು ಘಟಾನುಘಟಿ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ.