ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಪ್ರಭಾರಿಯಾಗಿ ಅಣ್ಣಾಮಲೈ ನೇಮಕ

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಪ್ರಭಾರಿಯಾಗಿ ಅಣ್ಣಾಮಲೈ ನೇಮಕ

ವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಪ್ರಭಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.

ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.

ಇದಲ್ಲದೆ, ಸಿಕ್ಕಿಂನಲ್ಲಿ ಪಕ್ಷದ ಸಂಘಟನೆಯಲ್ಲಿಯೂ ಬಿಜೆಪಿ ಬದಲಾವಣೆಗಳನ್ನು ಮಾಡಿದೆ. ಸಿಕ್ಕಿಂನಲ್ಲಿ ಪಕ್ಷವು ಡಿ.ಆರ್.ಥಾಪಾ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ನೇಮಿಸಿದೆ. ಇದಲ್ಲದೆ, ಪಕ್ಷದ ಶಾಸಕ ಎನ್.ಕೆ.ಸುಬ್ಬಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಶಾಸಕ ಡಿ.ಟಿ.ಲೆಪ್ಚಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ವಿಶೇಷ ಆಹ್ವಾನಿತರಾಗಿ ಸೇರಿಸಲಾಗಿದೆ.