ಸ್ಯಾಂಟ್ರೋ ರವಿಗಾಗಿ ಪೊಲೀಸರ ಹುಡುಕಾಟ; ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ
ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸ್ಯಾಂಟ್ರೋ ರವಿ ರಾಜ್ಯ ಸರ್ಕಾರದ ಹಲವು ಸಚಿವರ ಜೊತೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಸ್ಯಾಂಟ್ರೋ ಕಾರ್ ತರಿಸಿ, ಕಾರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಸ್ಯಾಂಟ್ರೋ ರವಿ ಮತ್ತು ಬಿಜೆಪಿ ಸರ್ಕಾರಕ್ಕೆ ಲಿಂಕ್ ಇದೆ ಎಂದು ಆರೋಪಿಸಿದ್ದಾರೆ. ಹಾಗೇ ಸ್ಯಾಂಟ್ರೋ ಕಾರ್ ಮೇಲೆ ಸ್ಯಾಂಟ್ರೋ ರವಿ ಮುಖವಾಡ ಧರಿಸಿದ ವ್ಯಕ್ತಿಯನ್ನು ಕೂರಿಸಿ ಪ್ರತಿಭಟನೆ ನಡೆಸಿದ್ದಾರೆ.ಸದ್ಯ, ಪೊಲೀಸರು ಆರೋಪಿ ಸ್ಯಾಂಟ್ರೋ ರವಿಗಾಗಿ ಹಲವು ಆಯಾಮಗಳಲ್ಲಿ ಹುಡುಕಾಟ ನಡೆಸುತ್ತಿದ್ದು, ವಾಟ್ಸಾಪ್ ಸ್ಟೇಟಸ್ನಲ್ಲಿದ್ದ ಯುವತಿಯರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಸದ್ಯ ಪೊಲೀಸರು ಹೊರ ರಾಜ್ಯದ ಯುವತಿಯರ ವಿಳಾಸವನ್ನು ಕಲೆ ಹಾಕುತ್ತಿದ್ದಾರೆ.