ಬಿಜೆಪಿ ಶಾಸಕ 'ನೆಹರು ಓಲೇಕಾರ್' ಗೆ ಬಿಗ್ ರಿಲೀಫ್ : ಜಾಮೀನು ನೀಡಿ ಹೈಕೋರ್ಟ್ ಆದೇಶ

ಬಿಜೆಪಿ ಶಾಸಕ 'ನೆಹರು ಓಲೇಕಾರ್' ಗೆ ಬಿಗ್ ರಿಲೀಫ್ : ಜಾಮೀನು ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು : ಬಿಜೆಪಿ ಶಾಸಕ ನೆಹರೂ ಓಲೆಕಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ತಡೆ ಕಾಯಿದೆಯಡಿ ನೆಹರು ಓಲೇಕಾರ್ ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿತ್ತು.

ಇದೀಗ ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೆಕಾರ್ ಗೆ 2 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು.. 50 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್ ಅವರು ಸ್ವಜನ ಪಕ್ಷಪಾತ ಮಾಡಿ, ಕಾಮಗಾರಿಯನ್ನು ಪುತ್ರರಿಗೇ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.. ಸದ್ಯ, ಬಿಜೆಪಿ ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.