ಬಿಜೆಪಿ ಶಾಸಕ 'ರೇಣುಕಾಚಾರ್ಯ' ಸಹೋದರನ ಪುತ್ರ ನಾಪತ್ತೆ : ಪೊಲೀಸರಿಂದ ಶೋಧ‍ ಕಾರ್ಯ

ಬಿಜೆಪಿ ಶಾಸಕ 'ರೇಣುಕಾಚಾರ್ಯ' ಸಹೋದರನ ಪುತ್ರ ನಾಪತ್ತೆ : ಪೊಲೀಸರಿಂದ ಶೋಧ‍ ಕಾರ್ಯ

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯಅವರ ಸಹೋದರನ ಪುತ್ರ ಚಂದ್ರಶೇಖರ್ ಕಾಣೆಯಾಗಿದ್ದು, ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.

ಶಾಸಕ ರೇಣುಕಾಚಾರ್ಯ ಅವರ ಸಹೋದರ ಪ್ರಥಮ ದರ್ಜೆ ಗುತ್ತಿಗೆದಾರ ಎಂ.ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ಭಾನುವಾರದಿಂದ ನಾಪತ್ತೆಯಾಗಿದ್ದು, ಪೊಲೀಸರಿಂದ ಶೋಧ ಕಾರ್ಯ ಆರಂಭವಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಮನೆಯಿಂದ ಭಾನುವಾರದಿಂದ ಚಂದ್ರಶೇಖರ್ ನಾಪತ್ತೆಯಾಗಿದ್ದು, ಎರಡು ದಿನಗಳಿಂದ ಎಲ್ಲಾಕಡೆ ಹುಡುಕಿದರೂ ಚಂದ್ರಶೇಖರ್ ಸುಳಿವು ಸಿಗಲಿಲ್ಲ, ಇದರಿಂದ ಆತಂಕಗೊಂಡ ಕುಟುಂಬಸ್ಥರು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತೀವ್ರ ಶೋಧ‍ ಕಾರ್ಯ ನಡೆಸಿದ್ದಾರೆ.