ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ' ರಾಜಕೀಯ ನಿವೃತ್ತಿ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ಕುಂದಾಪರು ವಾಜಪೇಯಿ ಎಂಬುದಾಗಿಯೇ ಪ್ರಖ್ಯಾತವಾಗಿದ್ದಂತ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಪ್ರಸ್ತುತ ರಾಜಕೀಯದಲ್ಲಿ ಸ್ಪರ್ಧಿಸದೇ ಇರೋದಕ್ಕೆ ನಿರ್ಧರಿಸಿದ್ದೇನೆ.
ಅಂದಹಾಗೇ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕುಂದಾಪುರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದವರು. ಇಂತಹ ಅವರು ಬಿಜೆಪಿಯಿಂದ ಯುವಕರಿಗೆ ಮನ್ನಣೆ ಸಿಗಲಿ. ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ನೀಡಲಿ ಎನ್ನುವ ಸಲುವಾಗಿ, ಬೆಂಬಲಿಸಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಘೋಷಣೆಯಾಗಿಲ್ಲ. ಮೇ.10ರಂದು ನಡೆಯುವಂತ ಮತದಾನಕ್ಕೆ ಶೀಘ್ರವೇ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸೋ ಸಾಧ್ಯತೆ ಇದೆ. ಆ ಪಟ್ಟಿಯಲ್ಲಿ ಕುಂದಾಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್ ಕೊಡ್ಗಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು
ಮಂಡ್ಯ : ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ನೋಟುಗಳನ್ನು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ಮಂಡ್ಯ ತಾಲ್ಲೂಕಿನ ಕ್ಯಾತುಂಗೆರೆಯಿಂದ ಡಿ.ಕೆ.ಶಿವಕುಮಾರ್ ರೋಡ್ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ವಾಹನದ ಮೇಲಿಂದ ಕಲಾವಿದರತ್ತ 500 ನೋಟುಗಳ ಹಣದ ಕಟ್ಟು ಎಸೆದಿದ್ದರು.
ನಂತರ ಹಣ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ವಿರುದ್ಧ ಚುನಾವಣೆ ಸೆಕ್ಟರ್ ಅಧಿಕಾರಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ