ಬಿಜೆಪಿ ಸರ್ಕಾರ ಅಂತ್ಯೋದಯದ ಪರಿಕಲ್ಪನೆಯನ್ನು ಹೊಂದಿದೆ: ನಳಿನ್‌ ಕುಮಾರ್‌ ಕಟೀಲ್‌

ಬಿಜೆಪಿ ಸರ್ಕಾರ ಅಂತ್ಯೋದಯದ ಪರಿಕಲ್ಪನೆಯನ್ನು ಹೊಂದಿದೆ: ನಳಿನ್‌ ಕುಮಾರ್‌ ಕಟೀಲ್‌

ಲಬುರಗಿ: ಇಂದು ಕಲಬುರಗಿ ಮತ್ತ ಯಾದಗಿರಿ ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

ಈ ಕುರಿತು ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ಅಂತ್ಯೋದಯದ ಪರಿಕಲ್ಪನೆಯನ್ನು ಹೊಂದಿದೆ. ಕಾಂಗ್ರೆಸ್​​ ಸುದೀರ್ಘ ಆಡಳಿತ ನಡೆಸಿದೆ. ಆದ್ರೆ ಅಭಿವೃದ್ಧಿ ಮಾಡಿಲ್ಲ ಎಂದರು.
ನಗರದಲ್ಲಿ ಮತನಾಡಿದ ಅವರು, ಕಾಂಗ್ರೆಸ್​​ ಸುದೀರ್ಘ ಆಡಳಿತ ನಡೆಸಿದೆ. ಆದ್ರೆ ಅಭಿವೃದ್ಧಿ ಮಾಡಿಲ್ಲ.75 ವರ್ಷಗಳ ಆಡಳಿತದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಹೀಗಾಗಿ ಡಬಲ್​ ಇಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಖರ್ಗೆ ಟಾರ್ಗೆಟ್ ಮಾಡುವ ಉದ್ದೇಶ ಪ್ರಧಾನಿ ನರೇಂದ್ರ ಮೋದಿಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮೋದಿ ಬರುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.