ಬಿಟಿ ಲಲಿತಾ ನಾಯಕ್ ಮಾತನ್ನು ನಾನು ಒಪ್ಪುವುದಿಲ್ಲ: ಶಾಸಕ ಯು ಟಿ ಖಾದರ್

ಬೆಂಗಳೂರು: ದೈವ ನರ್ತಕರಿಗೆ ಮಾಸಾಶನ ನೀಡಿದ್ದನ್ನು ವಿರೋಧಿಸಿದ್ದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್ ವಿರುದ್ಧ ಶಾಸಕ ಯು ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮಾನ್ಯ ಬಿಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವಿದೆ.
ದೈವ ನರ್ತಕರಿಗೆ ನೀಡಿರುವ ಮಾಸಾಧನ ಸರಿ ಅಲ್ಲ ಎನ್ನುವ ಮಾತನನ್ನು ನಾನು ಒಪ್ಪಲು ಸಿದ್ಧನಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇನ್ನೊಂದು ಟ್ವೀಟ್ನಲ್ಲಿ ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ಅವರು ಬರೆದಿದ್ದಾರೆ.