ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ; ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಶನಿವಾರ ಹಗಲಿಡೀ ಸುರಿದ ಮಳೆ ರಾತ್ರಿ ವೇಳೆ ಹಲವೆಡೆ ಬಿರುಸಾಗಿ ಸುರಿದಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಇದರ ಪರಿಣಾಮ ರಾಜಧಾನಿಗೂ ತಟ್ಟಿದ್ದು ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.