ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಬೇಧಿಸಿದ ಸಿಸಿಬಿ : ಬರೋಬ್ಬರಿ 6800 ಫೇಕ್ ಮಾರ್ಕ್ಸ್ ಕಾರ್ಡ್ ಪತ್ತೆ

ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಬೇಧಿಸಿದ ಸಿಸಿಬಿ : ಬರೋಬ್ಬರಿ 6800 ಫೇಕ್ ಮಾರ್ಕ್ಸ್ ಕಾರ್ಡ್ ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಕಲಿ ಮಾಕ್ಸ್ ಕಾರ್ಡ್ ಜಾಲ ಬೇಧಿಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಗರದ ಐದು ಸಂಸ್ಥೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ನಕಲಿ ಅಂಕಪಟ್ಟಿ ತಯಾರಿಸುತ್ತಿರುವುದು ಪತ್ತೆಯಾಗಿದೆ.

15 ವಿವಿಗಳು ಹಾಗೂ ಬೋರ್ಡ್ ಗಳ ನಕಲಿ ಅಂಕಪಟ್ಟಿ ಪತ್ತೆಯಾಗಿದೆ.

ಪರಿಶೀಲನೆ ವೇಳೆ ಬರೋಬ್ಬರಿ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದೆ. ಕೃತ್ಯಕ್ಕೆ ಬಳಸಿದ ಟೆಕ್ಸಿಕಲ್ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಜೈನ್ ವಿಹಾರ್ ಸೇರಿ 15 ವಿವಿಗಳ ನಕಲಿ ಅಂಕಪಟ್ಟಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆರೋಪಿ ವಿಕಾಸ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.