ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಯುವಕ

ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಯುವಕ

ಬೆಂಗಳೂರು: ಇಲ್ಲಿನ ಮೈಕೋಲೇಔಟ್‌ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಪಾಕ್‌ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.

ಘೋಷಣೆ ಕೂಗಿರುವ ಯುವಕನನ್ನು ಬಿಟಿಎಂ ಲೇಔಟ್‌ನ ಎರಡನೇ ಹಂತದ ವಾಸಿಯಾಗಿರುವ ಅಂಕುಶ್ ಅಂತ ತಿಳಿದು ಬಂದಿದ್ದು, ಘಟನೆ ಬಗ್ಗೆ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಮೈಕೋಲೇಔಟ್‌ ಪೋಲಿಸ್‌ ಠಾಣೆ ಸಿಬ್ಬಂದಿ ಯುವಕನನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ ಸಮಯದಲ್ಲಿ, ಯುವಕ ಮಾನಸಿಕ ಅಸ್ವಸ್ಥ ಅಂಥ ತಿಳಿದು ಬಂದಿದೆ.

BREAKING NEWS: ಧಾರವಾಡ ಪ್ರೀತಿಗೆ ಪಾಲಕರ ವಿರೋಧ ಹಿನ್ನೆಲೆ ಪ್ರೇಮಿಗಳು ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪಾಲಕರ ವಿರೋಧ ವ್ತಕ್ತಪಡಿಸುತ್ತಿದ್ದರೆ ಎಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

23ವರ್ಷದ ಮೈಲಾರಿ ಕಾಲಾಳದ ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ಬಳ್ಳಿ ಹೊರವಲಯದಲ್ಲಿ ಪಾಳುಬಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಬಗ್ಗೆ ಮತ್ತಷ್ಟು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಸ್ವಂತ ಕಾರಿನಲ್ಲಿ ಓಡಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹಾಕಲಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಮುಕ್ತಾಯವರೆಗೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು . ಏಪ್ರಿಲ್‌ ೧೦ರೊಳಗೆ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ.