ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ : ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ : ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ

ಬೆಂಗಳೂರು : ಇಂದು ಬೆಳ್ಳಗೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ಸತತ ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೋಗುವ ಬೈಕ್ ಸವಾರರು ಪರದಾಡುವಂತ್ತಾಗಿದೆ.

ಬೆಂಗಳೂರಿನ ಹಲವೆಡೆ ಮಳೆ ಅಬ್ಬರಿಸಿದೆ.

ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆಯಾಗಿದೆ . ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.