ಬೆಂಗಳೂರಿನಲ್ಲಿ ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ಕಾರು ಹರಿಸಿದ ದುಷ್ಕರ್ಮಿಗಳು!

ಬೆಂಗಳೂರಿನಲ್ಲಿ ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ಕಾರು ಹರಿಸಿದ ದುಷ್ಕರ್ಮಿಗಳು!

ಬೆಂಗಳೂರು : ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ದುಷ್ಕರ್ಮಿಗಳು ಮಾರುತಿ ಸ್ವಿಫ್ಟ್ ಕಾರು ಹರಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಮುತ್ತುರಾಯನಗರದಲ್ಲಿ ನಡೆದಿದೆ.

ಮುತ್ತುರಾಯ ನಗರದ ಸಪ್ತಗಿರಿ ಲೇಔಟ್ ನಲ್ಲಿ ಜನವರಿ 7 ರ ಬೆಳಗ್ಗೆ 11 ಗಂಟೆಗೆ ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ಕಾರು ಹರಿಸಿ ಪರಾರಿಯಾಗಿದ್ದಾರೆ.

ಸದ್ಯ ಆರೋಪಿಗಳು ನಾಯಿ ಮೇಲೆ ಕಾರು ಹರಿಸಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.