ಬೆಂಗಳೂರು: 'ಕಬ್ಜಾ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಅಮಿತಾಭ್ ಬಚ್ಚನ್

ಬೆಂಗಳೂರು: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ 'ಕಬ್ಜಾ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.
ಚಿತ್ರದ ಟ್ರೈಲರ್ ಬಿಡುಗಡೆಯ ಬಗ್ಗೆ ಅಮಿತಾಬ್ ಬಚ್ಚನ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕ ಆರ್ ಚಂದ್ರು, "ತುಂಬಾ ಧನ್ಯವಾದಗಳು ಸರ್.
ಈ ಹಿಂದೆ ಚಂದ್ರು ಚಿತ್ರದ ವಿಶೇಷ ಪೋಸ್ಟರ್ ವಿನ್ಯಾಸವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಾರ್ಚ್ ೧೭ ರಂದು ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ತಂಡ ಘೋಷಿಸಿದೆ.
ಕಬ್ಜಾದಲ್ಲಿ ಸೂಪರ್ ಸ್ಟಾರ್ ಗಳಾದ ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
ಶ್ರೇಯಾ ಸರನ್ ನಾಯಕಿಯಾಗಿದ್ದು, ಕೆಜಿಎಫ್ ಸರಣಿ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಟೀಸರ್ ಮತ್ತು ಹಾಡುಗಳು ಅಭಿಮಾನಿಗಳ ಹೃದಯವನ್ನು ಗೆದ್ದಿವೆ ಮತ್ತು ಚಲನಚಿತ್ರೋದ್ಯಮವು ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ನೋಡುತ್ತಿದೆ.