ಬೆಂಗಳೂರು: ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.
ಈ ಹಿನ್ನಲೆಯಲ್ಲಿ ವಿವಿಧ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಆದರೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗಿಲ್ಲ.
ಸಿಬ್ಬಂದಿ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಪೂರ್ವಭಾವಿ ರಜೆ ಪಡೆಯದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿದೆ ಎಚ್ಚರಿಸಿದೆ.
ವೈದ್ಯಾಧಿಕಾರಿಗಳ ಸಂಘವೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಸರ್ಕಾರಿ ಶಾಲಾ ಶಿಕ್ಷಕರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.