ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ; ಅಪಾರ್ಟ್‌ಮೆಂಟ್​​ವೊಂದರ 10ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಾಗವಾರ ಬಳಿ ವರದಿಯಾಗಿದೆ.

ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೊಹೀನ್‌ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಖಾಸಗಿ ಶಾಲೆಯ ಸಿಬ್ಬಂದಿ ಬೈದಿದ್ದರಿಂದ ಮೊಹೀನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ದೂರಿದ್ದಾರೆ. ಮತ್ತೊಂದೆಡೆ, ಅಪಾರ್ಟ್‌ಮೆಂಟ್‌ ಭದ್ರತಾ ಸಿಬ್ಬಂದಿ ವಿರುದ್ಧವೂ ಬೇಜವಾಬ್ದಾರಿ ಕಾರ್ಯ ಆರೋಪ ಕೇಳಿ ಬರುತ್ತಿದೆ. ವಿದ್ಯಾರ್ಥಿಯನ್ನು 10ನೇ ಮಹಡಿವರೆಗೆ ತೆರಳಲು ಅವಕಾಶ ನೀಡಿದ್ದೇಕೆ ಎಂದು ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.

ಸದ್ಯ ವಿದ್ಯಾರ್ಥಿ ಮೊಯಿನ್ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಸಂಬಂಧ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.