ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಕೊಡಗು, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕಳೆದ 2-3 ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಇನ್ನೂ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಕಲಬುರಗಿಯಲ್ಲಿ ನಿನ್ನೆ ಅತಿಹೆಚ್ಚು 39.7 ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯಾದಗಿರಿಯಲ್ಲಿ ಶೋಭಾಯಾತ್ರೆ ವೇಳೆ 2 ಗುಂಪುಗಳ ನಡುವೆ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಯಾದಗಿರಿ : ರಾಮನವಮಿಯ ಶೋಭಾಯಾತ್ರೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ.ನಿನ್ನೆ ನಡೆದ ರಾಮನವಮಿಯ ಶೋಭಾಯಾತ್ರೆ ವೇಳೆ ವೈಯಕ್ತಿಕ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

ಆಯುಷ್ಮಾನ್' ಆರೋಗ್ಯ ಕಾರ್ಡ್ ವಿತರಣೆ ಸ್ಥಗಿತ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ( Arogya Karnataka ID Card ) ವಿತರಣೆಯನ್ನು ರದ್ದುಗೊಳಿಸಲಾಗಿದೆ.ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದಂತ ರಂದೀಪ್ ಡಿ ಅವರು ತುರ್ತು ಸುತ್ತೋಲೆ ಹೊರಡಿಸಿದ್ದು, 2023ರ ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ( Assembly Election 2023 ) ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯ ಕಾರಣ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ ( AB-PMJAY-Ark ) ಗುರುತಿನ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡುವ ಪ್ರಕ್ರಿಯೆ ಸೇರಿದಂತೆ, ಗುರುತಿನ ಚೀಟಿಗೆ ಸಂಬಂಧಿತ ಎಲ್ಲಾ ಚಟುವಟಿಕೆಗಳನ್ನು ದಿನಾಂಕ 29-03-2023ರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿ ಆದೇಶಿಸಿದ್ದಾರೆ.