ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ

ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇದೀಗ ಬೆಳಗಾವಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಪಾಸಣೆ ಮಾಡಲಾಗಿದ್ದು ಬಸ್​​ನಲ್ಲಿದ್ದ 2 ಕೋಟಿ ಹಣ ಜಪ್ತಿ ಮಾಡಲಾಗಿದೆ.

ಹಣ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಮಹೇಂದ್ರ ಕುಮಾರ್​ ವಶಕ್ಕೆ ಪಡೆಯಲಾಗಿದೆ.

ಸದ್ಯಕ್ಕೆ ಪೊಲೀಸರು ಅನಧಿಕೃತ ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಧರ್ಭಿಕ ಚಿತ್ರ