ಬೆಳಗಾವಿಯಲ್ಲಿ ಮಹಾರಾಷ್ಟ್ರ ಸರ್ಕಾರಿ ಬಸ್ ನಲ್ಲಿ ಸಾಗಿಸುತ್ತಿದ್ದ 27.34 ಲಕ್ಷ ಹಣ ಪೊಲೀಸರ ವಶಕ್ಕೆ
ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ಮೂರು ಪಕ್ಷಗಳ ಪ್ರಚಾರ ಬೇಟೆ ಜೋರಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದೆ. ಹೀಗಾಗಿ ಕೆಲ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ.
ಇದೀಗ ಮತದಾರರ ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಇದೀಗ ಬೆಳಗಾವಿಯ ಮಹಾರಾಷ್ಟ್ರ ಸರ್ಕಾರಿ ಬಸ್ ನಲ್ಲಿ ಸಾಗಿಸುತ್ತಿದ್ದ 27.34 ಲಕ್ಷ ಹಣವನ್ನ ಬೆಳಗಾವಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.ಬೆಳಗಾವಿ ತಾಲೂಕಿನ ಬಾಚಿ ಚೆಕ್ ಪೋಸ್ಟ್ ನಲ್ಲಿ ದಾಖಲೇ ಇಲ್ಲದೇ ಮಹಾರಾಷ್ಟ್ರದ ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಪಾಂಡುರಂಗ ಎಂಬವರು ಹಣ ಸಾಗಿಸುತ್ತಿದ್ದರು. ಒ ವೇಳೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದಾಗ ಟೂರಿಸ್ಟ್ ಬ್ಯಾಗ್‍ನಲ್ಲಿ 27 ಲಕ್ಷ 34 ಸಾವಿರ ಹಣ ಪತ್ತೆಯಾಗಿದೆ. ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.