ಬೆಳಗಾವಿ ಭೀಕರ ಅಪಘಾತದಲ್ಲಿ 6 ಮಂದಿ ಸಾವು : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ : ಸಚಿವ ಕಾರಜೋಳ

ಬೆಳಗಾವಿ ಭೀಕರ ಅಪಘಾತದಲ್ಲಿ 6 ಮಂದಿ ಸಾವು : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ : ಸಚಿವ ಕಾರಜೋಳ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನ ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ವಾಹನ ಅಪಘಾತದಲ್ಲಿ 16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು.

ಮೃತರ ಕುಟುಂಬಕ್ಕೆ ಆಗಿರು ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.