ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಯಾದಗಿರಿ : ಯಾದಗರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೆರಾ ಕ್ರಾಸ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಟೆಗುಡ್ಡ ಗ್ರಾಮದ ಬಾಲಪ್ಪ ಜಟ್ಟೆಪ್ಪ ಹಾಗೂ ಕೊಡೆಕಲ್ ಗ್ರಾಮದ ಪರಸಪ್ಪ ಎಂದು ಗುರುತಿಸಲಾಗಿದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.