ಭಗವದ್ಗೀತೆ ಸಮಾರಂಭ; ಬಿಜೆಪಿಯ ದಲಿತ ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ ಆಯೋಜಕರು!

ದಾವಣಗೆರೆಯಲ್ಲಿ ನಡೆದ ಭಗವದ್ಗೀತೆ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಶಿಷ್ಟಾಚಾರದ ನೆಪದಲ್ಲಿ ದಲಿತ ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆ ನಡೆದಿದೆ. ದಾವಣಗೆರೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಭಾಗಿಯಾಗಿದ್ದರು. ವೇದಿಕೆ ಮೇಲಿದ್ದ ಮಾಯಕೊಂಡ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪ್ರೊ.ಎನ್. ಲಿಂಗಣ್ಣರನ್ನು ವೇದಿಕೆಯಿಂದ ಸಂಘಟಕರು ಕೆಳಗಿಳಿಸಿದ್ದಾರೆ. ಸದ್ಯ ಈ ನಡೆ ವ್ಯಾಪಾಕ ಟೀಕೆಗೆ ಗುರಿಯಾಗಿದೆ.