ಭವಿಷ್ಯದ ಪೀಳಿಗೆ ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಕಾಮಗಾರಿ- ಸಚಿವ ಕೆ.ಗೋಪಾಲಯ್ಯ

ಭವಿಷ್ಯದ ಪೀಳಿಗೆ ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಕಾಮಗಾರಿ- ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಭವಿಷ್ಯದ ಪೀಳಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿವೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ( Minister Gopalaiah ) ಹೇಳಿದರು.

ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ವಿರೋಧ ವ್ಯಕ್ತವಾಗುವುದು ಸಹಜ. ಇಂಥಹ ಸಮಸ್ಯೆಗಳನ್ನು ಕುಳಿತುಕೊಂಡ ಮಾತನಾಡಿ ಬಗೆಹರಿಸಲಾಗುವುದು ಎಂದರು.

ಸಕಲೇಶಪುರ ಭಾಗದಲ್ಲಿ ಮತ್ತೆ ಆರಂಭಗೊAಡಿರುವ ಕಾಡಾನೆ ಹಾವಳಿ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಕೇಳಿದ ಯಾವುದೇ ಕೆಲಸಗಳನ್ನು ಸಿಎಂ ಇಲ್ಲ ಎಂದಿಲ್ಲ. ಆನೆ ಹಾವಳಿ ವಿಚಾರದಲ್ಲಿ ಈಗಾಗಲೇ ಸಂಬAಧಿಸಿದ ಅಧಿಕಾರಿಗಳಿಗೆ ಸೂಚ್ಯವಾಗಿ ತಿಳಿಸಿ ಕಾರ್ಯಗತ ಮಾಡುವಂತೆ ತಾಕೀತು ಮಾಡಿದ್ದಾರೆ. ಹಂತ, ಹಂತವಾಗಿ ಹಾಸನ, ಮಡಿಕೇರಿ, ಚಿಕ್ಕಮಂಗಳೂರುಗಳಲ್ಲಿ ಆನೆಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕನಿಷ್ಟ 140 ಕೇತ್ರಗಳಲ್ಲಿ ಬಿಜೆಪಿ ಗೆದ್ದು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ಈ ವಿಚಾರದಲ್ಲಿ ವಿನಾಕಾರಣ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ಕೆ.ಗೋಪಾಲಯ್ಯ ಉತ್ತರಿಸಿದರು.