ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಚಾನುಗೆ ಟೋಕಿಯೋ ಒಲಿಂಪಿಕ್ಸ್ ಟಿಕೆಟ್

ನವದೆಹಲಿ: ಮಹಿಳೆಯರ 49 ಕೆಜಿ ವಿಭಾಗದಲ್ಲಿ ಭಾರತದ ವೇಟ್ಲಿಫ್ಟರ್ ಮಿರಾಬಾಯಿ ಚಾನು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ ಎಂದು ಅಂತಾರಾಷ್ಟ್ರೀಯ ವೇಟ್ಲಿಫ್ಟಿಂಗ್ ಸಂಸ್ಥೆ(ಐಡಬ್ಲ್ಯುಯುಎಸ್) ದೃಢಪಡಿಸಿದೆ.
ಏಪ್ರಿಲ್ನಲ್ಲಿ ತಾಷ್ಕೆಂಟ್ನಲ್ಲಿ ನಡೆದ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಚಾನು ಕ್ಲೀನ್ ಮತ್ತು ಜರ್ಕ್ನಲ್ಲಿ ವಿಶ್ವ ದಾಖಲೆ ಬರೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅಲ್ಲದೆ ಟೋಕಿಯೋಗೂ ಸ್ಥಾನ ಪಡೆದಿದ್ದರು. ಇದೀಗ ಇದು ಅಧಿಕೃತವಾಗಿ ದೃಡಟ್ಟಿದೆ.
ಮಹಿಳೆಯರ 49 ಕೆಜಿ ವಿಭಾಗದಲ್ಲಿ ಮೀರಾಬಾಯ್ ಟೋಕಿಯೊ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿರುವುದನ್ನು ಅಂತಾರಾಷ್ಟ್ರೀಯ ವೇಟ್ಲಿಫ್ಟಿಂಗ್ ಫೆಡರೇಶನ್(ಐಡಬ್ಲ್ಯುಎಫ್) ಖಚಿತಪಡಿಸಿದೆ.
ಮುಂಬರುವ ಟೋಕಿಯೊ ಒಲಿಂಪಿಕ್ಸ್ನಲ್ಲಿ ವೇಟ್ಲಿಫ್ಟರ್ ಮೀರಾಬಾಯಿ ಚಾನು ಚಿನ್ನದ ಪದಕಕ್ಕಾಗಿ ಹೋರಾಡಲಿದ್ದಾರೆ ಎಂದು ಭಾರತೀಯ ವೇಟ್ಲಿಫ್ಟಿಂಗ್ ಫೆಡರೇಶನ್(ಐಡಬ್ಲ್ಯೂಎಲ್ಎಫ್) ಪ್ರಧಾನ ಕಾರ್ಯದರ್ಶಿ ಸಹದೇವ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.