ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿರುವ ನಟ ಕಮಲ್ ಹಾಸನ್

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿರುವ ನಟ ಕಮಲ್ ಹಾಸನ್

ನಟ ಕಮಲ್ ಹಾಸನ್ ಅವರು ಡಿಸೆಂಬರ್ 24 ರಂದು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ನಟ, ರಾಜಕಾರಣಿ ಕಮಲ್ ಹಾಸನ್ ಮುಂದಿನ ವಾರ ದೆಹಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೇರಿಕೊಳ್ಳಲಿದ್ದಾರೆ. ಸೂಪರ್‌ಸ್ಟಾರ್ ಅವರನ್ನು ಯಾತ್ರೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಆಹ್ವಾನಿಸಿದ್ದಾರೆ ಎಂದು ಅವರ ಪಕ್ಷವಾದ ಮಕ್ಕಳ್ ನೀದಿ ಮೈಯಂ ಹೇಳಿದೆ.