ʻಭಾರತ ರಾಮ ರಾಜ್ಯ ದತ್ತ ಸಾಗುತ್ತಿದೆʼ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ʻಭಾರತ ರಾಮ ರಾಜ್ಯ ದತ್ತ ಸಾಗುತ್ತಿದೆʼ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ವದೆಹಲಿ: ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುವುದರೊಂದಿಗೆ ಭಾರತವು 'ರಾಮ ರಾಜ್ಯ'ದತ್ತ ಸಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ಇಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಅಧಿಕಾರಿ ಧೀರಜ್ ಭಟ್ನಾಗರ್ ಅವರ ರಾಮಚರಿತಮಾನಸ್ ನ ಹಿಂದಿ ಕಾವ್ಯಾತ್ಮಕ ಅನುವಾದ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿಂಗ್, ಭಗವಾನ್ ರಾಮನು ತೋರಿಸಿದ ಮಾರ್ಗದಲ್ಲಿ ಸರ್ಕಾರವು ನಡೆಯುತ್ತಿದೆ ಎಂದು ಹೇಳಿದರು.

ಭಗವಾನ್ ರಾಮನ ಆದರ್ಶಗಳ ಹಾದಿಯಲ್ಲಿ ನಡೆಯಲು ಸಾಧ್ಯವಾಗಿದೆ ಎಂದು ಹೇಳಲು ಸಂತೋಷಪಡುತ್ತೇನೆ. ರೈತರು, ಕಾರ್ಮಿಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು, ಯುವಕರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನಾನು ನಿಮ್ಮನ್ನು ದಾರಿತಪ್ಪಿಸಲು ಬಯಸುವುದಿಲ್ಲ. ನಾವು ದೇಶದಲ್ಲಿ ರಾಮರಾಜ್ಯವನ್ನು ಪ್ರಾರಂಭಿಸಿದ್ದೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಾವು ಖಂಡಿತವಾಗಿಯೂ ಆ ದಿಕ್ಕಿನಲ್ಲಿ ಸಾಗಿದ್ದೇವೆ' ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ ರಾಷ್ಟ್ರಗಳ ಸಹಭಾಗಿತ್ವದಲ್ಲಿ ಭಾರತದ ಘನತೆ ಏರಿದೆ ಎಂದು ಕೇಂದ್ರ ಸಚಿವರು ಹೇಳಿದರು.