ಭಾವಿಪತಿಯ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡ ಹರಿಪ್ರಿಯಾ
ವಾರದ ಹಿಂದೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇದೀಗ ಟೆಂಪಲ್ ರನ್ ಮಾಡುತ್ತಿದ್ದರು. ಈ ನಡುವೆ ಕೊಂಚ ಬಿಡುವು ಮಾಡಿಕೊಂಡು ವಸಿಷ್ಠ ಸಿಂಹ ನಟಿಸುತ್ತಿರುವ ಲವ್ ಲಿ ಸಿನಿಮಾದ ಶೂಟಿಂಗ್ ಸೆಟ್ ಗೆ ಭೇಟಿ ನೀಡಿದ್ದಾರೆ. ಕೆಲ ಹೊತ್ತು ಚಿತ್ರೀಕರಣದ ಸ್ಥಳದಲ್ಲಿದ್ದು, ಸಮಯ ಕಳೆದಿದ್ದಾರೆ.
ವಸಿಷ್ಠ ಸಿಂಹ ಅಭಿನಯದ love ಲಿ ಸಿನೆಮಾ ಚಿತ್ರೀಕರಣ ಉಡುಪಿಯಲ್ಲಿ ನಡೆಯುತ್ತಿದೆ. ಅಲ್ಲದೇ, ಕೆಲ ದಿನಗಳಿಂದ ವಸಿಷ್ಠ ಕೂಡ ಉಡುಪಿಯಲ್ಲೇ ಬೀಡು ಬಿಟ್ಟಿದ್ದಾರೆ. ನಿಶ್ಚಿತಾರ್ಥ ಮುಗಿಸಿಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಇದೀಗ ಭಾವಿ ಪತ್ನಿಯೊಂದಿಗೆ ದೇವಸ್ಥಾನಕ್ಕೂ ತೆರಳಿ ಆನಂತರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚೇತನ್ ಕೇಶವ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ವಸಿಷ್ಠ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.
ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಮುನ್ನ ವಸಿಷ್ಠ ಮತ್ತು ಹರಿಪ್ರಿಯಾ ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿದರು.
ನಿಶ್ಚಿತಾರ್ಥ ನಂತರ ಕೆಲ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಿಂಹಪ್ರೀಯ ಸುತ್ತಾಡುತ್ತಿದ್ದಾರೆ. ಶೀಘ್ರ ಹಸೆಮಣೆ ಏರುವ ಬಗ್ಗೆ, ಮುಂದಿನ ಚಿತ್ರಗಳ ಬಗ್ಗೆ ಸ್ವಾಮೀಜಿ ಗೆ ವಶಿಷ್ಠಸಿಂಹ ಮಾಹಿತಿ ನೀಡಿದರು. ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ವೇಳೆ ಕಾಣಿಯೂರು ಶ್ರೀಗಳು ನವ ಜೋಡಿಯನ್ನು ಮಠದ ವತಿಯಿಂದ ಗೌರವಿಸಿದರು.