ಭೀಕರ ರಸ್ತೆ ಅಪಘಾತ: ಡಿಎಂಕೆ ಶಾಸಕರ ಸಂಬಂಧಿಗಳು ಸೇರಿದಂತೆ 7 ಮಂದಿ ಸಾವು

ಭೀಕರ ರಸ್ತೆ ಅಪಘಾತ: ಡಿಎಂಕೆ ಶಾಸಕರ ಸಂಬಂಧಿಗಳು ಸೇರಿದಂತೆ 7 ಮಂದಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರದಲ್ಲಿ ಮೂವರು ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ.

ಕಳೆದ ಮಧ್ಯರಾತ್ರಿ ಆಡಿ ಕ್ಯೂ 3 ಕಾರು ಫುಟ್ ಪಾತ್ ಮೇಲಿದ್ದ ಬೀದಿ ದೀಪ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಆಡಿ ಕಾರು ಕಂಬಕ್ಕೆ ಅಪ್ಪಳಿಸಿ ಸ್ಥಳದಲ್ಲಿಯೇ ಆರು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಕರುಣಾಸಾಗರ, ಬಿಂದು, ಇಶಿತಾ, ಡಾ ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಎಂದು ಗುರುತಿಸಲಾಗಿದೆ. ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತರಿಗೆ ಮರಣೋತ್ತರ ಪರೀಕ್ಷೆ ನಡೆದಿದ್ದು ಮೃತಪಟ್ಟವರು ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ.

ಡಿಎಂಕೆ ಶಾಸಕನ ಪುತ್ರ: ಮೃತಪಟ್ಟವರೆಲ್ಲರು ತಮಿಳುನಾಡು ಮೂಲದವರಾಗಿದ್ದು ಬೆಂಗಳೂರಿಗೆ ಕೆಲಸ ನಿಮಿತ್ತ ಬಂದಿದ್ದರು ಎಂದು ತಿಳಿದುಬಂದಿದೆ. ಅವರಲ್ಲೊಬ್ಬ ಮೃತ ಕರುಣಾಸಾಗರ್ ಹೊಸೂರಿನ ಡಿಎಂಕೆ ಶಾಸಕ ವೈ.ಪ್ರಕಾಶ್ ಪುತ್ರ ಮತ್ತು ಅವರ ಪತ್ನಿ ಬಿಂದು ಆಗಿದ್ದು ಅದನ್ನು ಶಾಸಕರೇ ದೃಢಪಡಿಸಿದ್ದಾರೆ.