ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ, ಇನ್ನು ಭೂ ಪರಿವರ್ತನೆ ಪ್ರಕ್ರಿಯೆ ಸರಳ
ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ತಿದ್ದುಪಡಿ ಅಂಗೀಕಾರವಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಭೂಕಂದಾಯ ಕಾಯ್ದೆ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣವಾಗಲಿದೆ. ಕೃಷಿಭೂಮಿಯ ನಿವಾಸಿಗಳು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಉದ್ದೇಶಕ್ಕಾಗಿ ಬೇರೆಡೆಗೆ ವರ್ಗಾವಣೆಗೆ ಬಯಸಿದರೆ, ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗೆ ಅಫಿಡವಿಟ್ ಸಲ್ಲಿಸಬಹುದು.