ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಿಲ್ಲʼ : ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಅಸಮಾಧಾನ

ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಿಲ್ಲʼ : ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಅಸಮಾಧಾನ

ಚಿತ್ರದುರ್ಗ: ಮುಂದಿನ ವಿಧಾನ ಸಭೆ ಚುನಾವಣೆಗೆ ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಅವರು ಈ ಹಿಂದೆ 8 ರಿಂದ 10 ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದರು.

ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಭೋವಿ ಸಮಾಜದ ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಈ ಬಾರಿ ಸಮುದಾಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಡೆಗಣನೆ ಮಾಡಿದ್ದಾರೆ ಅದರಲ್ಲೂ ಪ್ರಮುಖವಾಗಿ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಇಬ್ಬರು ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಅವರನ್ನು ಕಡೆಗಣನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಅವರನ್ನು ಸಹ ಕಡೆಗಣನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.