ಮಂಗಳೂರಿನಲ್ಲಿ ಗಾಂಜಾ ದಂಧೆ ಬಯಲು : ಮೆಡಿಕಲ್ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿ ಅರೆಸ್ಟ್

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ನಡೆದಿದ್ದು, ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ ಎಂಬಾತನನ್ನುಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈ ಸ್ಪೋಟಕ ಸತ್ಯ ಬಯಲಾಗಿದೆ. ಬಂಧಿತರಿಂದ 2 ಕೆ.ಜಿ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.