ಮಂಗಳೂರಿನಲ್ಲಿ ದೇಶದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ.
ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮಾರ್ಚ್ ತಿಂಗಳ ಈವರೆಗಿನ ದಾಖಲೆಯಾಗಿದೆ.
ಉಭಯ ಜಿಲ್ಲೆಗಳಲ್ಲಿ ದಿನವಿಡೀ ಸೆಕೆ ಮತ್ತು ಉರಿಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು