ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ : ಮಾ.20ರಿಂದ 'RTE ಸೀಟಿ'ಗಾಗಿ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ( RTE Admission ) ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act - RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುವುದು ಎಂದಿದ್ದಾರೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕು. ಆ ಬಳಿಕ ಆನ್ ಲೈನ್ ಮೂಲಕವೇ ಆರ್ ಟಿಇ ಸೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ