ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತೆ; ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ಪ್ರಶ್ನೆ

ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತೆ; ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ಪ್ರಶ್ನೆ

ಬೆಂಗಳೂರು: ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶದ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, 'ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯನವರ ಈ ಹೇಳಿಕೆಗೆ ಇದೀಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.

ಶನಿವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ

'ಸಿದ್ದರಾಮಯ್ಯನವರೇ ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?' ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ.
ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ @BJP4Karnataka ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು