ಮಹಾರಾಷ್ಟ್ರಕ್ಕೆ ಮತ್ತೆ ಬಸ್ ಸಂಚಾರ ಆರಂಭ; ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ರಾಜ್ಯದಿಂದ ಮಹಾರಾಷ್ಟ್ರದ ವಿವಿಧ ನಗರ & ಪಟ್ಟಣಗಳಿಗೆ ಗುರುವಾರದಿಂದ ಬಸ್ ಸಂಚಾರ ಆರಂಭಗೊಂಡಿದೆ. ಬೆಳಗಾವಿ ಸೇರಿ ವಿವಿಧ ವಿಭಾಗಗಳ ಬಸ್ ಗಳನ್ನು ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಕೊಲ್ಹಾಪುರ, ನಾಸಿಕ್, ಮುಂಬೈ, ಪುಣೆ ಮತ್ತಿತರ ನಗರಗಳಿಗೆ ಸಂಚರಿಸುತ್ತಿದೆ. ಬೆಳಗಾವಿ ಗಡಿ ವಿವಾದ ತಾರಕಕ್ಕೇರಿದ ಪರಿಣಾಮ ಕ-ಮ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮತ್ತೆ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿರಾಳರಾಗಿದ್ದಾರೆ.