ಮಹಾರಾಷ್ಟ್ರ : ಗಂಡನ ಸಾವನ್ನು ಪ್ರಶ್ನಿಸಿದ ಮಹಿಳೆಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಮಹಾರಾಷ್ಟ್ರ: ವಿಧವೆಯೊಬ್ಬಳನ್ನು ಥಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಜನವರಿ 30 ರಂದು ನಾಸಿಕ್ ನಗರದಿಂದ 65 ಕಿಮೀ ದೂರದಲ್ಲಿರುವ ಚಂದವಾಡ ತಾಲೂಕಿನ ಶಿವರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಮಹಿಳೆ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಳು. ಹೀಗಾಗಿ, ಆಕೆಯ ಪತಿ ಆಕೆಯನ್ನು ಮತ್ತು ಇಬ್ಬರು ಮಕ್ಕಳನ್ನು ತವರು ಮನೆಯಲ್ಲಿ ಇರಿಸಿದ್ದನು. ಇದಾದ ಬಳಿಕ ಎರಡು ಬಾರಿ ಅವರನ್ನು ಭೇಟಿ ಮಾಡಲು ಬಂದಿದ್ದನು. ಆದ್ರೆ, ಪತಿಯು ತನ್ನ ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಂಬಂಧಿಕರು ಆಕೆಗೆ ಹೇಳಿದ್ದಾರೆ. ಜನವರಿ 30 ರಂದು ಪತಿಯ ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಮಹಿಳೆ ತನ್ನ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಗಲಾಟೆ ಮಅಡಿದ್ದಳು. ಇದರಿಂದ ಕೋಪಗೊಂಡ ಗ್ರಾಮದ ಕೆಲವು ಮಹಿಳೆಯರು ಮಹಿಳೆಯ ಮುಖಕ್ಕೆ ಕಪ್ಪು ಮಸಿ ಬಳಿದು ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ.
ಈ ಸುದ್ದಿ ತಿಳಿದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದ್ರೆ, ಘಟನೆ ಬಗ್ಗೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.