ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಸಿಎಂ ಬೊಮ್ಮಾಯಿಗೆ ಅಪಮಾನ
ಬೆಂಗಳೂರು : ಮಹಾರಾಷ್ಟ್ರ ಸರ್ಕಾರದಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮತ್ತೆ ಅಪಮಾನ ಮಾಡಲಾಗಿದ್ದು, ಕರ್ನಾಟಕದ ಸಿಎಂ ಬೊಮ್ಮಾಯಿ ದಾದಾಗಿರಿ ಹೆಚ್ಚಾಗಿದೆ ಎಂದು ಮಹಾರಾಷ್ಟ್ರ ಎಂಎಲ್ ಸಿ ಹೇಳಿದ್ದಾರೆ.
ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಕರ್ನಾಟಕದ ಗಡಿ ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಘೋಷಣೆ ವಿಚಾರದ ಕುರಿತು ನಡೆದ ಚರ್ಚೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಎಂಎಲ್ ಸಿ ಡಾ.ಮನಿಷಾ ಉದ್ಧಟತನ ತೋರಿದ್ದು, ಕರ್ನಾಟಕ ಹಾಗೂ ಸಿಎಂ ಬೊಮ್ಮಾಯಿ ಬಗ್ಗೆ ಹಗುರವಾಗಿ ಮಾತನಾಡಿದ್ದು, ಕರ್ನಾಟಕ ಹಾಗೂ ಸಿಎಂ ಬೊಮ್ಮಾಯಿ ದಾದಾಗಿರಿ ಹೆಚ್ಚಾಗಿದೆ.
ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗಷ್ಟೇ ಕರ್ನಾಟಕದ ಗಡಿ ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಘೋಷಣೆ ಮಾಡಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಈ ಯೋಜನೆಯನ್ನು ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.