ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ಸೆಲ್ಕೋ ಸೋಲಾರ್ ಲೈಟ್ ಕಾರ್ಯಯೋಜನೆ

ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ಸೆಲ್ಕೋ ಸೋಲಾರ್ ಲೈಟ್ ಕಾರ್ಯಯೋಜನೆ

ಮಹಿಳಾ ಸಮೃದ್ಧಿ ಹಾಗೂ ಗೃಹ ಕೈಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ಸೋಲಾರ್ ವ್ಯವಸ್ಥೆ ಬಳಸಿಕೊಂಡು ಹಲವಾರು ಆವಿಷ್ಕಾರಗಳನ್ನು ಮಾಡಲಾಗಿದೆ ಎಂದು ಉಪ ಮಹಾ ಪ್ರಬಂಧಕ ಪ್ರಸನ್ನ ಹೆಗಡೆ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಹಲವು ಯಂತ್ರೋಪಕರಣಗಳನ್ನು ಪರಿಚಯಿಸುವ ನಿಟ್ಟಿನಲ್ಲಿ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ಮಹಿಳಾ ಸಬಲೀಕರಣ ಹಾಗೂ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಮಹಿಳೆಯರನ್ನು ಕೇಂದ್ರವಾಗಿಸಿಕೊಂಡು ಡಿಸೆಂಬರ್ 4 ರಂದು “ಸಮೃದ್ಧಿ ಸಂತೃಪ್ತಿ” ಎಂಬ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸನಂದನ ಕುಲಕರ್ಣಿ, ಕರಿಸ್ವಾಮಿ ಕೆ., ಗುರುಮೂರ್ತಿ, ದೀಪು ನಲವಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.